Friday, 22nd November 2024

ಡಿಎಂಕೆ ನಾಯಕ ಕೆ.ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಎಂಕೆ ನಾಯಕ ಕೆ. ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ.

ಸಚಿವ ಪೊನ್ಮುಡಿ ಹಾಗೂ ಅವರ ಪತ್ನಿ ವಿಶಾಲಾಕ್ಷಿ ಬೆಳಗ್ಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಇದರೊಂದಿಗೆ ಕೋರ್ಟ್ ಆವರಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಸಚಿವ ಪೊನ್ಮುಡಿ ಕಡೆಯವರು ಸಚಿವರ ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಶಿಕ್ಷೆ ವಿಧಿಸುವ ಮುನ್ನ ಅದನ್ನು ಪರಿಗಣಿಸುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಬಳಿಕ ಸಚಿವ ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಮೂರ್ತಿ ಜಿ.ಜಯಚಂದ್ರ ತೀರ್ಪು ಪ್ರಕಟಿಸಿ ದರು. ಜೊತೆಗೆ ಸಚಿವ ಪೊನ್ಮುಡಿ ಹಾಗೂ ಅವರ ಪತ್ನಿಗೆ ತಲಾ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದರು.

ನ್ಯಾಯಾಲಯ ಮೂರು ವರ್ಷಗಳ ಶಿಕ್ಷೆ ವಿಧಿಸಿರುವುದರಿಂದ ಸ್ವಯಂಚಾಲಿತವಾಗಿ ಅವರ ಶಾಸಕ ಸ್ಥಾನ ಅನರ್ಹವಾಗುತ್ತದೆ.