ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಗಡಿ ಜಿಲ್ಲೆಗಳಾದ ರಜೌರಿ ಹಾಗೂ ಪೂಂಚ್ ನಲ್ಲಿ ಹೈ ಅಲರ್ಟ್ ಘೋಷಮೆ ಮಾಡಲಾಗಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಘಟನೆ ಬಳಿಕ ಭಿಂಬರ್ ಗಲಿ-ಪೂಂಚ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಗುರುವಾರ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬರ್ ಗಲಿ ಪ್ರದೇಶದ ಬಳಿ ಸೇನಾ ವಾಹನವನ್ನು ಗುರಿ ಯಾಗಿಸಿ ಉಗ್ರರು ದಾಳಿ ನಡೆಸಿದ್ದರು.
ಘಟನೆಗೆ ಸಂಬಂಧಿಸಿ ಎನ್ಐಎ ತಂಡ ಶುಕ್ರವಾರ ಮಧ್ಯಾಹ್ನ 12:30ರ ಸುಮಾರಿಗೆ ದೆಹಲಿಯಿಂದ ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಿದೆ.