ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ ಇಂದು ಮುಂಜಾನೆ 5:07 ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್‌ಬ್ಲೇರ್ ಪ್ರದೇಶದಲ್ಲಿ ಬೂಮಿಯಿಂದ 10 ಕಿಮೀ ಆಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.