Friday, 2nd June 2023

ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನ, ಬಂಧನ

ನಾಗ್ಪುರ್: ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ರೋಸಿ ವ್ಯಕ್ತಿಯೊಬ್ಬ ಎಲೆಕ್ಟ್ರಿಕ್ ಸರಬರಾಜು ಸಂಸ್ಥೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಹಾರಾಷ್ಟ್ರದಲ್ಲಿ ಘಟನೆ ಸಂಭವಿಸಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಓಲ್ಡ್ ಮಂಗಳವಾರಿ ಪ್ರದೇಶದ ರಾಜೇಶ್ ಸುಧಾಮ್ ಬ್ಯಾಂಡ್ ಎಂದು ಗುರುತಿಸ ಲಾಗಿದೆ. ತನ್ನ ಮನೆಯ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಹೀಗಾಗಿ ವಿದ್ಯುತ್ ಸಂಸ್ಥೆಯವರು ಆತನ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದ್ದರು.

ಅಧಿಕಾರಿಗಳ ಈ ಧೋರಣೆಯಿಂದ ಬೇಸತ್ತ ರಾಜೇಶ್ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡ. ಜತೆಗೆ ಬಂದಿದ್ದ ಮತ್ತೊಬ್ಬ ವ್ಯಕ್ತಿ ಬೆಂಕಿಪೊಟ್ಟಣ ಹೊರ ತೆಗೆದು ಬೆಂಕಿ ಹಚ್ಚಲು ಮುಂದಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದುಕೊಂಡಿದ್ದ ರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಕಳೆದ ಎರಡು ವರ್ಷಗಳಿಂದ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಸಂಪರ್ಕ ಕಡಿತಗೊಳಿಸಲಾಗಿತ್ತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

error: Content is protected !!