Friday, 13th December 2024

ಏಳು ದಿನಗಳ ಪೊಲೀಸ್ ಕಸ್ಟಡಿಗೆ ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪ್ರಬೀರ್

ವದೆಹಲಿ: ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಸೇರಿದಂತೆ ಇಬ್ಬರನ್ನು ಬಂಧಿಸಿದ ಒಂದು ದಿನದ ನಂತರ ಬುಧವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಮಂಗಳವಾರ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು ಕಾಯ್ದೆ ಮತ್ತು ಇತರ ವಿಭಾಗಗಳ ಅಡಿ ಯಲ್ಲಿ ಅವರ ಕಚೇರಿಯಲ್ಲಿ ದಾಳಿ ನಡೆಸಿದ ನಂತರ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ದೆಹಲಿ ಪೊಲೀಸರ ಪ್ರಕಾರ, ಆವರಣದಲ್ಲಿ ಒಟ್ಟು 37 ಪುರುಷ ಶಂಕಿತರನ್ನು ಪ್ರಶ್ನಿಸಲಾಗಿದೆ ಮತ್ತು ಒಂಬತ್ತು ಮಹಿಳಾ ಶಂಕಿತರನ್ನು ಅವರ ಆಯಾ ಸ್ಥಳಗಳಲ್ಲಿ ಪ್ರಶ್ನಿಸಲಾಗಿದೆ.

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ನಡೆಸಲಾದ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು ಬಂಧನಗಳಿಗೆ ಸಂಬಂಧಿಸಿದಂತೆ, ಇದುವರೆಗೆ ಇಬ್ಬರು ಆರೋಪಿಗಳಾದ ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿದೆ. ಡಿಜಿಟಲ್ ಸಾಧನಗಳು, ದಾಖಲೆಗಳು ಇತ್ಯಾದಿ ಗಳನ್ನು ವಶಪಡಿಸಿಕೊಂಡು ಪರೀಕ್ಷೆಗೆ ಸಂಗ್ರಹಿಸಲಾಗಿದೆ.