Saturday, 23rd November 2024

ಕೂಲಿ ಕಾರ್ಮಿಕರಿಗೆ ನೆರವು: ಗರೀಬ್​ ಕಲ್ಯಾಣ ಅನ್ನಯೋಜನೆಯಡಿ ಐದು ಕೆಜಿ ಅಕ್ಕಿ, ಆಹಾರ ಧಾನ್ಯ

ನವದೆಹಲಿ: ಕೋವಿಡ್​ ಎರಡನೇ ಅಲೆಯಿಂದಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಏರ್ಪಟ್ಟಿದ್ದರೆ, ಮತ್ತೊಂದು ಕಡೆ ಕರ್ಫ್ಯೂ, ಲಾಕ್​ಡೌನ್​ನಿಂದಾಗಿ ಬಡ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಕೋವಿಡ್​ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರ ನೆರವಿಗೂ ಧಾವಿಸುವ ಹಿನ್ನಲೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಯೋಜನೆಯಡಿ ಬಡ ಜನರಿಗೆ ಉಚಿತವಾಗಿ ಆಹಾರ ಧಾನ್ಯ ನೀಡಲು ತೀರ್ಮಾನಿಸಿದೆ. ಮೇ ಮತ್ತು ಜೂನ್ ಎರಡು​ ತಿಂಗಳ ಆಹಾರ ಧಾನ್ಯಗಳನ್ನು ಬಡ ಕೂಲಿಕಾರ್ಮಿಕ ವರ್ಗದವರಿಗೆ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಎರಡನೇ ಅಲೆ ಕೋವಿಡ್​ ಸೋಂಕನ್ನು ಎದುರಿಸುತ್ತಿರುವಾಗ ಬಡವರಿಗೆ ಪೌಷ್ಠಿಕಾಂಶದ ಆಹಾರ ನೀಡುವುದು ಅತಿ ಮುಖ್ಯ. ಇದೇ ಹಿನ್ನಲೆ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆಯಡಿ ಐದು ಕೆಜಿ ಅಕ್ಕಿ ಮತ್ತು ಆಹಾರ ಧಾನ್ಯವನ್ನು ದೇಶದ ಬಡ ಜನರಿಗೆ ನೀಡಲಾಗುವುದು. 80 ಕೋಟಿ ಫಲಾನುಭವಿಗಳಿಗೆ ಈ ಯೋಜನೆ ತಲುಪಲಿದೆ. ಸರ್ಕಾರ 26 ಸಾವಿರ ಕೋಟಿ ರೂ ವ್ಯಯಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.