Sunday, 15th December 2024

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ

ಪಣಜಿ: ಗೋವಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಮೋದ್ ಸಾವಂತ್ ಸೋಮವಾರ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳ ಲಿದ್ದಾರೆ.

ಸೋಮವಾರ ಪಣಜಿಯಲ್ಲಿ ನಡೆದ ನೂತನ ಬಿಜೆಪಿ ಶಾಸಕರು ಮತ್ತು ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಸಾವಂತ್’ರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಬಿಜೆಪಿ ಕೇಂದ್ರ ವೀಕ್ಷಕರಾದ ನರೇಂದ್ರ ಸಿಂಗ್ ತೋಮರ್ ಮತ್ತು ಎಲ್ ಮುರುಗನ್, ವಿಧಾನಸಭಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್ ತಾನವಡೆ ಭಾಗವಹಿಸಿದ್ದರು.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸಾವಂತ್ ಅವರ ಹೆಸರನ್ನು ಶಾಸಕ ವಿಶ್ವಜಿತ್ ರಾಣೆ ಪ್ರಸ್ತಾಪಿಸಿದರು. ಅವರ ಪ್ರಸ್ತಾಪವನ್ನು ಮೌವಿನ್ ಗೊಡಿನ್ಹೋ ಮತ್ತು ರೋಹನ್ ಖೌಂಟೆ ಸೇರಿದಂತೆ ಇತರ ಶಾಸಕರು ಅನುಮೋದಿಸಿದರು.