ಪಟನಾ: ಬಿಹಾರ ಲೋಕಸೇವಾ ಆಯೋಗ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಖಂಡಿಸಿ ಮತ್ತು ಈಗಾಗಲೇ ನಡೆದಿರುವ ಪೂರ್ವಭಾವಿ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಜನ ಸೂರಜ್ ಸಂಘ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್(Prashant Kishor) ಪ್ರತಿಭಟನೆ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ಜ.2ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ(Hunger strike) ಘೋಷಿಸಿರುವ ಪ್ರಶಾಂತ್ ಕಿಶೋರ್ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ಏಕಾಏಕಿ ಅರೆಸ್ಟ್ ಮಾಡಿದ್ದಾರೆ. ಪ್ರಶಾಂತ್ ಕಿಶೋರ್ ಮತ್ತು ಅವರ ಬೆಂಬಲಿಗರು ತಕ್ಷಣ ಪ್ರತಿಭಟನಾ ಸ್ಥಳದಿಂದ ತೆರಳುವಂತೆ ಪೊಲೀಸರು ನೊಟೀಸ್ ಜಾರಿಗೊಳಿಸಿದ್ದರು. ಇದಕ್ಕೆ ಒಪ್ಪದೇ ಇದ್ದಾಗ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
10ಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ಪೊಲೀಸರನ್ನೊಳಗೊಂಡ ಒಳಗೊಂಡ ತುಕಡಿಯು ಬೆಳಿಗ್ಗೆ 3.45 ರ ಸುಮಾರಿಗೆ ಗಾಂಧಿ ಮೈದಾನಕ್ಕೆ ಆಗಮಿಸಿತು ಮತ್ತು ಅವರ ಬೆಂಬಲಿಗರ ಪ್ರತಿರೋಧದ ನಡುವೆಯೂ ಕಿಶೋರ್ ಅವರನ್ನು ಬಂಧಿಸಿ ಕರೆದೊಯ್ದರು.
#WATCH | BPSC protest | Bihar: Patna Police detains Jan Suraaj chief Prashant Kishor who was sitting on an indefinite hunger strike at Gandhi Maidan pic.twitter.com/cOnoM7EGW1
— ANI (@ANI) January 5, 2025
ಉಪವಾಸ ಸತ್ಯಾಗ್ರಹವನ್ನು ಗರ್ದಾನಿ ಬಾಗ್‌ಗೆ ಸ್ಥಳಾಂತರಿಸುವಂತೆ ಸೂಚಿಸಿದ ಸೂಚನೆಯನ್ನು ಕಿಶೋರ್ ನಿರ್ಲಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಗಾಂಧಿ ಮೈದಾನದಲ್ಲಿ ಅಕ್ರಮ ಪ್ರತಿಭಟನೆಗಾಗಿ ಪೊಲೀಸರು ಪ್ರಶಾಂತ್ ಕಿಶೋರ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಿಸಿದ್ದಾರೆ. ಹಲವು ಬಾರಿ ಸೂಚನೆ ನೀಡಿದರೂ ಗಾಂಧಿ ಮೈದಾನದಿಂದ ಪ್ರತಿಭಟನೆಯನ್ನು ತೆರವುಗೊಳಿಸಲು ಅವರು ಒಪ್ಪಲಿಲ್ಲ. ಹೀಗಾಗಿ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಗರ್ದಾನಿ ಬಾಗ್‌ನಲ್ಲಿ ಪ್ರತಿಭಟನೆಗಾಗಿ ಗೊತ್ತುಪಡಿಸಿದ ಸ್ಥಳದಲ್ಲಿ ಮಾತ್ರ ಧರಣಿ ನಡೆಸಲು ಅವಕಾಶವಿದೆ ಎಂದು ಸಿಂಗ್ ಪಾಟ್ನಾ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದರು.
ಇನ್ನು ಪ್ರಶಾಂತ್ ಕಿಶೋರ್ ಬಂಧನದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ತೀವ್ರ ವಿರೋಧ ಮತ್ತು “ವಂದೇ ಮಾತರಂ” ಘೋಷಣೆಗಳ ನಡುವೆ ಪೊಲೀಸರು ಕಿಶೋರ್‌ನನ್ನು ಕರೆದುಕೊಂಡು ಹೋಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. ಕಿಶೋರ್ ಅವರ ಸಹ ಪ್ರತಿಭಟನಾಕಾರರು ಪೊಲೀಸರನ್ನು ತಡೆಯಲು ಪ್ರಯತ್ನಿಸಿದರು.ಕಿಶೋರ್ ಬೆಂಬಲಿಗರು ಗಲಾಟೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸುದ್ದಿಯನ್ನೂಓದಿ: Prashant Kishor: ಚುನಾವಣಾ ರಣತಂತ್ರ ರೂಪಿಸುವ ಪ್ರಶಾಂತ್ ಕಿಶೋರ್ ಫೀಸ್ ಕೇಳಿದ್ರೆ ಶಾಕ್ ಆಗ್ತೀರಾ! ಈ ಬಗ್ಗೆ ಅವ್ರು ಹೇಳೋದೇನು?