Friday, 13th December 2024

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಇಂದು

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆಯನ್ನು ಭಾನುವಾರ ಕರೆಯಲಾಗಿದೆ.

ನ.29ರಿಂದ 17ನೇ ಲೋಕಸಭೆಯ ಏಳನೇ ಅಧಿವೇಶನವು ಪ್ರಾರಂಭವಾಗಲಿದ್ದು, ಡಿ.23ಕ್ಕೆ ಮುಕ್ತಾಯವಾಗಲಿದೆ. ಈ ಅಧಿವೇಶನವು ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದು ಕೊಂಡಿದೆ.

ಕೃಷಿ ಕಾನೂನು ರದ್ದತಿ, ಕೋವಿಡ್‌ ಲಸಿಕೆ ಭದ್ರತೆ, ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿ ಕಾರ ಅವಧಿ ವಿಸ್ತರಣೆ, ಹಣದುಬ್ಬರ, ಇಂಧನ ಬೆಲೆ ಏರಿಕೆ ಮತ್ತು ಕಾಶ್ಮೀರದಲ್ಲಿ ನಾಗರಿ ಕರ ಮೇಲೆ ಉಗ್ರರ ದಾಳಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಅಧಿವೇಶನ ದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಹೋರಾಟದ ಕಾರ್ಯತಂತ್ರ ರೂಪಿಸಲು ವಿರೋಧ ಪಕ್ಷಗಳ ನಾಯಕರು ಸೋಮವಾರ ಬೆಳಿಗ್ಗೆ ಸಭೆ ಸೇರಲಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಂಬಂಧ ಸಂಸತ್ತಿನ ಉಭಯ ಸದನಗಳ ಪ್ರತಿಪಕ್ಷಗಳ ಸದನದ ನಾಯಕರಿಗೆ ಪತ್ರ ಬರೆದಿದ್ದಾರೆ.