ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೋವಿಡ್-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅಗಲಿದ್ದಾರೆ.