Wednesday, 17th July 2024

ಲತಾ ಮಂಗೇಶ್ಕರ್‌ ನಿಧನ: ರಾಷ್ಟ್ರಪತಿ, ಮೋದಿ ಸಂತಾಪ

ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್‌ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೋವಿಡ್‌-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅಗಲಿದ್ದಾರೆ.

‘ಲತಾ ಜೀ ಅವರ ನಿಧನವು ನನ್ನ ಹೃದಯವನ್ನು ಕಲುಕಿತು. ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಇದೇ ಅನುಭವ ಆಗಿದೆ. ಲತಾ ಅವರು ತಮ್ಮ ಹಾಡುಗಳ ಮೂಲಕ ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್‌ ಮಾಡಿದ್ದಾರೆ.

error: Content is protected !!