Saturday, 14th December 2024

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ನಾಯ್ಡು

ನವದೆಹಲಿ: ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಮತ್ತು ಡಾ.ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಮುಕ್ತಾರ್ ಅಬ್ಬಾಸ್ ನಕ್ವಿ, ನಿರ್ಮಲಾ ಸೀತಾರಾಮನ್, ಸ್ಮತಿ ಇರಾನಿ, ಡಾ. ಹರ್ಷವರ್ಧನ, ಪ್ರಕಾಶ್ ಜಾವ್ಡೇಕರ್, ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖಂಡರಾದ ರಾಹುಲ್‍ಗಾಂಧಿ, ಗುಲಾಂ ನಬಿ, ಅಹಮದ್ ಪಟೇಲ್, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಲೋಕಸಭಾಧ್ಯಕ್ಷ ಓಂ ಬಿರ್ಲಾ, ವಿವಿಧ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಅನೇಕ ರಾಜಕೀಯ ಪಕ್ಷಗಳ ಮುಖಂಡರು ದೇಶದ ಮುಸ್ಲಿಂ ಬಾಂಧವರಿಗೆ ಈದ್ ಶುಭಾಶಯ ಸಲ್ಲಿಸಿದ್ದಾರೆ.

ಈದ್ ಮಿಲಾದ್ ಮುಸ್ಲಿಂ ಬಾಂಧವರಲ್ಲಿ ಸುಖ, ಸಂತೋಷ, ನೆಮ್ಮದಿ-ಸಮೃದ್ಧಿ ನೀಡಲಿ. ವಿಶ್ವದಾದ್ಯಂತ ಭ್ರಾತೃತ್ವ, ಸೌಹಾರ್ದತೆ ಮತ್ತಷ್ಟು ಬಲಗೊಳ್ಳಲಿ ಎಂದು ಗಣ್ಯರು ಶುಭ ಕೋರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಈದ್ ಮಿಲಾದ್ ಉನ್ ನಭಿ ಆಚರಿಸುವಂತೆ ಗಣ್ಯರು ಸಲಹೆ ಮಾಡಿದ್ದಾರೆ.

Dailyhunt