Sunday, 15th December 2024

75 ನೇ ಹುಟ್ಟುಹಬ್ಬ ಆಚರಿಸಿಕೊಂಡ ರಾಷ್ಟ್ರಪತಿ ಕೋವಿಂದ್

ನವದೆಹಲಿ : ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಗುರುವಾರ ತಮ್ಮ 75 ನೇ ಹುಟ್ಟುಹಬ್ಬ ಆಚರಿಸಿ ಕೊಂಡರು. ಅವರಿಗೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ‘ರಾಷ್ಟ್ರಪತಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನೀತಿ ವಿಷಯಗಳ ಬಗ್ಗೆ ಬುದ್ಧಿವಂತ ತಿಳುವಳಿಕೆ ನಮ್ಮ ರಾಷ್ಟ್ರಕ್ಕೆ ಉತ್ತಮ ಸ್ವತ್ತುಗಳಾಗಿವೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಎಂದು ಶುಭ ಕೋರಿದ್ದಾರೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ ಅಧ್ಯಕ್ಷ ಕೋವಿಂದ್ ಅವರಿಗೆ ಜನ್ಮದಿನದ ಶುಭಾಶಯಗಳು. ನಾನು ಅವರ ಜನ್ಮದಿನದಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಜಿ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಅವರಿಗೆ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲೆಂದು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನು ಅನೇಕ ರಾಜಕೀಯ ಗಣ್ಯರು ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ.