ನವದೆಹಲಿ : ರಾಜಧಾನಿ ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಂಡರು.
60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆ ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ಕೊವಿಡ್-19 ವಿರುದ್ಧ ಲಸಿಕೆ ಹಾಕಿಸಿದರು.
ಇದಕ್ಕೂ ಮುನ್ನ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಾಂಕ್ವೆಲಿಮ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ತೆಗೆದುಕೊಂಡರು.