ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಅಂಗವಾಗಿ ಶುಕ್ರವಾರ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಶುಭಾಶಯ ಕೋರಿರುವ ರಾಮನಾಥ್ ಕೋವಿಂದ್ ಅವರು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ನಿಮ್ಮಲ್ಲಿರುವ ಸೇವಾ ಮನೋಭಾವದಿಂದ ರಾಷ್ಟ್ರ ಸೇವೆ ಮುಂದುವರೆಸಿ ಎಂದು ಹೇಳಿದ್ದಾರೆ.
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಅಸಾಧಾರಣ ದೃಷ್ಟಿಕೋನ, ಅನುಕರಣೀಯ ನಾಯಕತ್ವ ಮತ್ತು ಸಮರ್ಪಿತ ಸೇವೆಯು ರಾಷ್ಟ್ರದ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ. ದೇವರು ಅವರಿಗೆ ಆರೋಗ್ಯ, ಆಯಸ್ಸು, ಸಂತೋಷ ನೀಡಲಿ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸೆಪ್ಟೆಂಬರ್ 17, 1950 ರಂದು ಗುಜರಾತಿನಲ್ಲಿ ಜನಿಸಿದರು. ಬಡ ಕುಟುಂಬದಲ್ಲಿ ಜನಿಸಿದ ಅವರು, ಸಂಘಪರಿವಾರಕ್ಕೆ ಸೇರಿ ನಿರಂತರ ಹೋರಾಟಗಳ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು.