Thursday, 12th December 2024

ವಿಶ್ರಾಂತಿಗಾಗಿ ಆಧ್ಯಾತ್ಮಿಕದತ್ತ ಪ್ರಧಾನಿ ಮೋದಿ..!

ವದೆಹಲಿ: ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆ ಮೋದಿ ಅವರು ವಿಶ್ರಾಂತಿಗಾಗಿ ಆಧ್ಯಾತ್ಮಿಕದತ್ತ ಮುಖ ಮಾಡಲಿದ್ದಾರೆ.

ಮೇ 30 ರಿಂದ ಜೂನ್​​ 1ನೇ ತಾರೀಖಿನವರೆಗೆ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಇರಲಿದ್ದಾರೆ. ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಹಗಲು-ರಾತ್ರಿ ಧ್ಯಾನದಲ್ಲಿ ತೊಡಗಲಿದ್ದಾರೆ ಎನ್ನಲಾಗುತ್ತಿದೆ.

ಲೋಕಸಭಾ ಚುನಾವಣೆ ಪ್ರಕ್ರಿಯೆಗಳು ಶುರುವಾದಾಗಿನಿಂದ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರಧಾನಿ ಮೋದಿ ದೇಶದುದ್ದಕ್ಕೂ ಪ್ರಚಾರ ರ್ಯಾಲಿ ಗಳನ್ನು ನಡೆಸಿದರು. ಜೂನ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಚುನಾವಣೆಗೆ ಎರಡು ದಿನಗಳ ಮೊದಲು ಚುನಾವಣಾ ಪ್ರಚಾರವು ಕೊನೆಗೊಳ್ಳುತ್ತದೆ.

ಪ್ರಧಾನಮಂತ್ರಿಯವರು ಗುರುವಾರ ಸಂಜೆ ಕನ್ಯಾಕುಮಾರಿಯ ಸಮುದ್ರ ಮಧ್ಯೆದಲ್ಲಿರುವ ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿರುವ ಸುಂದರವಾದ VRM ಗೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 1 ರಂದು ದೆಹಲಿಗೆ ತೆರಳಬಹುದು.

ವಿವೇಕಾನಂದರು ದೇಶಾದ್ಯಂತ ಸುತ್ತಾಡಿದ ನಂತರ ಇಲ್ಲಿಗೆ ಆಗಮಿಸಿದರು, ಮೂರು ದಿನಗಳ ಕಾಲ ಧ್ಯಾನ ಮಾಡಿದರು. ಅಭಿವೃದ್ಧಿ ಹೊಂದಿದ ಭಾರತದ ದರ್ಶನವನ್ನು ಹೊಂದಿದ್ದರು.. ಅದೇ ಸ್ಥಳದಲ್ಲಿ ಧ್ಯಾನ ಮಾಡುವುದು ವಿಕ್ಷಿತ್ ಭಾರತ್‌ನ ದರ್ಶನವನ್ನು ಜೀವಂತಗೊಳಿಸಲು ಪ್ರಧಾನಿ ಮೋದಿಯವರ ಬದ್ಧತೆಯನ್ನು ತೋರಿಸುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು.