ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವ ಧನ ನೀಡುವುದಾಗಿ ಬುಧವಾರ ಪ್ರಕಟಿಸಿದ್ದಾರೆ.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಲು ಬಯಸಿದ್ದ ಆಶಾ ಕಾರ್ಯಕರ್ತರ ಮೇಲೆ ಶಹಜ ಹಾನ್‌ಪುರದಲ್ಲಿ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ತುಣಕನ್ನು ಟ್ಯಾಗ್ ಮಾಡಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಸೇವೆಯನ್ನು ಅವಮಾನಿಸುತ್ತಿದೆ ಎಂದು ದೂರಿದ್ದಾರೆ.
ಗೌರವಧನವನ್ನು ಹೆಚ್ಚಿಸಿ ಎಂದು ಕೇಳುವುದು ಅವರ ಹಕ್ಕು. ಅವರ ಬೇಡಿಕೆ ಈಡೇರಿಸುವುದು ಸರ್ಕಾರದ ಕರ್ತವ್ಯ. ಕಾರ್ಯ ಕರ್ತೆಯರ ಮಾತುಗಳನ್ನು ಆಲಿಸಿ’ ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.