Sunday, 15th December 2024

ಪ್ರತಿಭಟನಾನಿರತ ರೈತರೊಂದಿಗೆ ಕೇಂದ್ರ ಸರ್ಕಾರ ಇಂದೇ ಚರ್ಚೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಕೇಂದ್ರ ಸರ್ಕಾರ ಮಂಗಳವಾರ ಚರ್ಚೆಗೆ ಆಹ್ವಾನಿಸಿದೆ.

ಮೂರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುವುದರಿಂದ ಸರ್ಕಾರ ಹಿಂದೆ ಸರಿದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಯ್ದೆಗಳನ್ನು ತಮ್ಮ ಮಾಸಿಕ ‘ಮನ್‌ ಕಿ ಬಾತ್‌’ ರೇಡಿಯೊ ಕಾರ್ಯಮಕ್ರಮದಲ್ಲಿ ಸಮರ್ಥನೆ ಮಾಡಿಕೊಂಡಿ ದ್ದರು. ರೈತರ ವಿಚಾರದಲ್ಲಿ ‘ವಿರೋಧ ಪಕ್ಷಗಳು ತಂತ್ರಗಾರಿಗೆ ಪ್ರಯೋಗಿಸುತ್ತಿವೆ’ ಎಂದು ಮೋದಿ ಆರೋಪಿಸಿದ್ದರು. ಈ ಮಧ್ಯೆ ಕೇಂದ್ರ ಸರ್ಕಾರ ರೈತರೊಂದಿಗೆ ಚರ್ಚೆ ನಡೆಸಲು ನಿರ್ಧರಿಸಿದೆ. ನಿಗದಿತ ಸಮಯಕ್ಕಿಂತಲೂ ಎರಡು ದಿನ ಮೊದಲೇ ರೈತರನ್ನು ಚರ್ಚೆಗೆ ಕರೆಯಲಾಗಿದೆ.

‘ಚಳಿ ಮತ್ತು ಕೋವಿಡ್‌-19 ಅನ್ನು ಗಮನದಲ್ಲಿಟ್ಟುಕೊಂಡು ಡಿಸೆಂಬರ್ 3ಕ್ಕಿಂತಲೂ ಮೊದಲೇ ನಾವು ರೈತ ಸಂಘಗಳ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿದ್ದೇವೆ,’ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು. ಅಲ್ಲದೆ, ರೈತರು ತಮ್ಮ ಪ್ರತಿಭಟನೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.