Thursday, 12th December 2024

ಸ್ಪೀಕರ್‌ ರಾಜೀನಾಮೆಗೆ ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಪ್ರತಿಭಟನೆ

ತಿರುವನಂತಪುರ: ಕೇರಳ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ಮೊದಲ ದಿನ ಶುಕ್ರವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣದ ವೇಳೆ, ಸ್ಪೀಕರ್‌ ಪಿ. ಶ್ರೀರಾಮಕೃಷ್ಣನ್‌ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಡಾಲರ್‌ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ ಸ್ಪೀಕರ್‌ ಪಿ. ಶ್ರೀರಾಮಕೃಷ್ಣನ್‌ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ರಾಜ್ಯಪಾಲರು ಸರ್ಕಾರದ ಯೋಜನೆ ಕುರಿತಾಗಿ ‍ಭಾಷಣ ಮಾಡಲು ಆರಂಭಿಸಿದಾಗ, ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ಸ್ಪೀಕರ್‌ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದರು.