Sunday, 13th October 2024

2000 ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಪ್ರತಿಭಟನೆ: ಇರಾನಿ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಉಳಿಸಲು ಪ್ರತಿಭಟನೆ ನಡೆಸುತ್ತಿಲ್ಲ, ಬದಲಾಗಿ ರಾಹುಲ್ ಗಾಂಧಿ ಅವರ ಎರಡು ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಹೀಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಸೋಮವಾರ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗೆ ತೆರಳಿರುವ ರಾಹುಲ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಡೆಸಿರುವ ಬೃಹತ್ ಪ್ರತಿಭಟನೆಗೆ ಕುರಿತು ಇರಾನಿ ಪ್ರತಿಕ್ರಿಯಿಸಿದ್ದಾರೆ.

ಪ್ರತಿಭಟನೆಯು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ. ಈ ಹಿಂದೆಂದೂ “ಅಕ್ರಮ ಸಂಪತ್ತನ್ನು” ರಕ್ಷಿಸಲು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಲು ಪ್ರಯತ್ನಿಸಿಲ್ಲ. ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದ ಕಾರಣ ತನಿಖಾ ಸಂಸ್ಥೆಯ ಮೇಲೆ ಒತ್ತಡ ಹೇರಲು ಬೀದಿಗಿಳಿದಿದ್ದಾರೆ.

ಯಾರೂ ಕಾನೂನಿಗಿಂತ ಮೇಲಲ್ಲ, ರಾಹುಲ್ ಗಾಂಧಿ ಕೂಡ ಕಾನೂನಿಗಿಂತ ಮೇಲಲ್ಲ ಎಂದು ಪ್ರತಿಪಾದಿಸಿದರು.