Sunday, 10th November 2024

ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್, ಪಡಿತರ, ವೋಟರ್ ಐಡಿ ನೀಡಿ: ಸುಪ್ರೀಂಕೋರ್ಟ್ ಆದೇಶ

ನವದೆಹಲಿ : ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ ನೀಡುವಂತೆ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟದ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್‌, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳ ಗೊಂಡ ನ್ಯಾಯಪೀಠವು, ಮೂಲಭೂತ ಹಕ್ಕುಗಳನ್ನು ಪಡೆಯಲು ದೇಶದ ಪ್ರತಿಯೊಬ್ಬ ನಾಗರಿಕರು ಅರ್ಹರು. ಹೀಗಾಗಿ ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ವೋಟರ್ ಐಡಿ ನೀಡುವಂತೆ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಲೈಂಗಿಕ ಕಾರ್ಯಕರ್ತೆಯರಿಗೆ ಮೂಲಭೂತ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ನೀಡುವ ಕುರಿತಂತೆ 2011ರಲ್ಲೇ ಹಲವು ನಿರ್ದೇಶನಗಳನ್ನು ನೀಡಿತ್ತು. ಇದೀಗ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಲೈಂಗಿಕ ಕಾರ್ಯಕರ್ತೆಯರಿಗೆ ಆಧಾರ್ ಕಾರ್ಡ್. ಪಡಿತರ ಚೀಟಿ, ವೋಟರ್ ಐಡಿ ನೀಡುವಂತೆ ಆದೇಶ ಹೊರಡಿಸಿದೆ.