ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಆರಂಭಿಸಿದ್ದ ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿಗೂ ಕೋವಿಡ್ ಸೋಂಕು ಒಕ್ಕರಿಸಿದ್ದು, ಟೂರ್ನಿಯನ್ನು ಮುಂದೂಡಲಾಗಿದೆ.
ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದ್ದು, ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿ ಕೊಂಡಿದೆ. ಹೀಗಾಗಿ ಪಿಎಸ್‌ಎಲ್ ಅನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದೆ.
ಸೋಂಕು ದೃಢಪಟ್ಟಿದ್ದ ಇಬ್ಬರೂ ಆಟಗಾರರನ್ನು 10 ದಿನಗಳ ಕಾಲ ಪ್ರತ್ಯೇಕವಾಗಿರಿಸಲಾಗುತ್ತದೆ ಎಂದು ಪಿಸಿಬಿ ಮಾಹಿತಿ ನೀಡಿತ್ತು. ಆದರೆ ಇಂದು ಎರಡು ತಂಡಗಳ ಮೂವರು ಆಟಗಾರರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಫೆ.20ರಿಂದ ಆರಂಭವಾದ ಈ ಟೂರ್ನಿಯಲ್ಲಿ 7 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ.
ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಅಲೆಕ್ಸ್ ಹೇಲ್ಸ್ ಅವರಿಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಮೂರು ಪ್ಲೇಆಫ್ ಮತ್ತು ಫೈನಲ್ ಪಂದ್ಯವನ್ನು ರದ್ದು ಮಾಡಲಾಗಿತ್ತು.