Tuesday, 24th September 2024

Pulwama Terror attack: ಪುಲ್ವಾಮ ದಾಳಿಯ ಉಗ್ರ ಹೃದಯಾಘಾತದಿಂದ ಸಾವು

Pulwama terror attack

ಶ್ರೀನಗರ: ಐದು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರ(Jammu and Kashmir)ದ ಪುಲ್ವಾಮಾ(Pulwama Terror attack)ದಲ್ಲಿ ನಡೆದ ಭಯೋತ್ಪಾದಕಾ ದಾಳಿಯ ಆರೋಪಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾನೆ. ಜಮ್ಮುವಿನ ಸರ್ಕಾರಿ ಮೆಡಿಕಲ್‌ ಕಾಲೇಜಿನ ಆಸ್ಪತ್ರೆಯಲ್ಲಿ ಬಿಲಾಲ್‌ ಅಹ್ಮದ್‌ ಕುಚೇ(Bilal Ahmad Kuchey) ಎಂಬಾತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸೆಪ್ಟೆಂಬರ್ 17 ರಂದು ಕಿಶ್ತ್ವಾರ್ ಜಿಲ್ಲಾ ಜೈಲಿನಲ್ಲಿ ಅನಾರೋಗ್ಯಕ್ಕೆ ಒಳಗಾದ ಕುಚೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. 2020ರ ಆಗಸ್ಟ್ 25ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕುಚೇ ಮತ್ತು ಇತರ 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಫೈಲ್‌ ಮಾಡಿದೆ. ಈ ಪ್ರಕರಣದಲ್ಲಿ ಬಂಧಿತರಾದ ಏಳು ಆರೋಪಿಗಳಲ್ಲಿ ಕುಚೇ ಕೂಡ ಸೇರಿದ್ದಾನೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಲವತ್ತು ಸಿಆರ್‌ಪಿಎಫ್‌ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್‌ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್ ಇ ಮೊಹಮ್ಮದ್ ಸಂಘಟನೆ ವಿಡಿಯೋವನ್ನು ಬಿಡುಗಡೆ ಮಾಡಿತು, ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದಾನೆ.

ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೆಎಂನ ನಾಯಕ ಮಸೂದ್ ಅಜರ್‌ಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತ್ತು.

ಈ ಸುದ್ದಿಯನ್ನೂ ಓದಿ: Terror attack: 3 ಎನ್‌ಕೌಂಟರ್‌… 5 ಉಗ್ರರ ಹತ್ಯೆ-ಕಣಿವೆ ರಾಜ್ಯದಲ್ಲಿ ಸೇನೆ ಭರ್ಜರಿ ಬೇಟೆ