ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವೆ ಗುರುವಾರ ಮಾತುಕತೆ ನಡೆಯಲಿದ್ದು, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ.
ಶಾ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿರುವ ಅಮರೀಂದರ್ ಸಿಂಗ್, ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಶಾಸನಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸ ಲಾಗಿದೆ.