Thursday, 21st November 2024

ಜಲಂಧರ್ ಲೋಕಸಭೆ ಉಪ ಚುನಾವಣೆ: ಗೆಲುವಿನತ್ತ ಆಪ್‌

ನವದೆಹಲಿ: ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.
ಚಲಾವಣೆಯಾದ 8.87 ಲಕ್ಷ ಮತಗಳ ಪೈಕಿ 7.10 ಲಕ್ಷಕ್ಕೂ ಹೆಚ್ಚು ಮತಗಳ ಎಣಿಕೆ ಪೂರ್ಣ ಗೊಂಡಿದೆ ಎಂದು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಒಡಿಶಾದ ಜಾರ್ಸುಗುಡ ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪಚುನಾವಣೆಯ 16ನೇ ಸುತ್ತಿನ ಮತ ಎಣಿಕೆಯ ನಂತರ ಆಡಳಿತಾರೂಢ ಬಿಜೆಡಿ ಅಭ್ಯರ್ಥಿ ದಿಪಾಲಿ ದಾಸ್ ಅವರು ಬಿಜೆಪಿಯ ಪ್ರತಿಸ್ಪರ್ಧಿ ಟಂಕಧರ್ ತ್ರಿಪಾಠಿ ಅವರಿಗಿಂತ 42,395 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ದಿಪಾಲಿ ದಾಸ್ 94,326 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 51,931 ಮತಗಳನ್ನು ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ತರುಣ್ ಪಾಂಡೆ 4,133 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.