Saturday, 23rd November 2024

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ: 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು

ಲಖನೌ: ದ್ವಿತೀಯ ಪಿಯು ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು ಪಡಿಸಲಾಗಿದೆ.

ಪ್ರಕರಣ ಪತ್ತೆಯಾದ ಬೆನ್ನಲ್ಲೇ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಲ್ಲಿಯಾ ಜಿಲ್ಲೆಯಲ್ಲಿ 12ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾ ಗಿರುವುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವೆ ಗುಲಾಬ್ ದೇವಿ ತಿಳಿಸಿದ್ದಾರೆ.

ಕೇವಲ 24 ಜಿಲ್ಲೆಗಳಲ್ಲಿ ಮಾತ್ರ ಏಕೆ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂಬ ಪ್ರಶ್ನೆಗೆ, ಸೋರಿಕೆಯಾಗಿರುವ ಪ್ರಶ್ನೆ ಪತ್ರಿಕೆಗಳನ್ನು 24 ಜಿಲ್ಲೆಗಳಲ್ಲಿ ಮಾತ್ರ ಹಂಚಿಕೆಯಾಗಿರುವುದು ತಿಳಿದು ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ ಆರಂಭಕ್ಕೂ ಮುನ್ನವೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ  ಆರಾಧನಾ ಶುಕ್ಲಾ ತಿಳಿಸಿದ್ದಾರೆ.