Sunday, 15th December 2024

ರಾಯ್‌ಬರೇಲಿಯಿಂದ ರಾಹುಲ್ ನಾಮಪತ್ರ ಸಲ್ಲಿಕೆ

ವದೆಹಲಿ: ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಬಿಜೆಪಿ ಕ್ರಮವಾಗಿ ಸ್ಮೃತಿ ಇರಾನಿ ಮತ್ತು ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕಣಕ್ಕಿಳಿಸಿದ್ದು, ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ.

ಕಾಂಗ್ರೆಸ್ ಎರಡು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಬಾರಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಮರು ಸ್ಪರ್ಧಿಸಿರುವ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಭದ್ರಕೋಟೆಯಾಗಿರುವ ರಾಯ್ಬರೇಲಿಯಿಂದ ನಾಮಪತ್ರ ಸಲ್ಲಿಸಿದರು.

ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ರಾಯ್ ಬರೇಲಿ ತಲುಪಿದರು/. ರಾಹುಲ್ ಗಾಂಧಿ ಮಧ್ಯಾಹ್ನ ಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.