ನವದೆಹಲಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಎರಡು ದಿನಗಳ ಭೇಟಿಗಾಗಿ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಗುರುವಾರ ಮಧ್ಯಾಹ್ನ ಬೆಂಗಳೂರು ನಗರಕ್ಕೆ ಆಗಮಿಸುವ ಅವರು ನೇರವಾಗಿ ತುಮ ಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡು ವರು. ವಿಮಾನದಲ್ಲಿ ನಗರಕ್ಕೆ ಆಗಮಿಸುವ ರಾಹುಲ್ ಗಾಂಧಿ ಬಳಿಕ ರಸ್ತೆ ಮಾರ್ಗವಾಗಿ ಸಿದ್ಧಗಂಗಾ ಮಠ ತಲುಪಲಿದ್ದಾರೆ.
ಶಿವಕುಮಾರ ಸ್ವಾಮೀಜಿ ಅವರ 105ನೇ ಜಯಂತಿ ಪ್ರಯುಕ್ತ ಗದ್ದುಗೆಗೆ ನಮನ ಸಲ್ಲಿಸಿ ಬಳಿಕ ಸಂಜೆ 6.45ಕ್ಕೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹಕ್ಕೆ ವಾಪಸಾಗಲಿದ್ದಾರೆ. ಎರಡೂ ದಿನ ಪಕ್ಷದ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಲಿಂ.ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮದಿನದ ಹಿನ್ನೆಲೆಯಲ್ಲಿ ಗುರುವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರಿಗೆ ಭರ್ಜರಿ ಸ್ವಾಗತ ನೀಡಲು ಪಕ್ಷ ಸಿದ್ಧತೆ ನಡೆಸಿದೆ. ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಸಂಜೆ 4 ಗಂಟೆಗೆ ಆಗಮಿಸುವ ರಾಹುಲ್ ಗಾಂಧಿ ಅವರು ತುಮಕೂರಿನ ಜಾಸ್ಟೋಲ್ ಗೇಟ್ ಬಳಿ ಇರುವ ಎಚ್ಎಂಎಸ್ ಎಂಜಿನಿಯರಿಂಗ್ ಕಾಲೇಜಿಗೆ ತೆರಳಲಿದ್ದಾರೆ.
ಏ.1 ರಂದು ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಕಾರಿ ಸಮಿತಿ ಉದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಹಲವರು ಭಾಗವಹಿಸಲಿದ್ದಾರೆ.