Sunday, 15th December 2024

ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅಮಾನತು

ವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

‘ನಿಯಮಗಳ ಉಲ್ಲಂಘನೆ, ದುರ್ನಡತೆ, ಆಕ್ಷೇಪಾರ್ಹ ನಡವಳಿಕೆ ಆರೋಪದ ಮೇಲೆ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರದ ತಿದ್ದುಪಡಿ ಮಸೂದೆ- 2023ರ ಕುರಿತಾದ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆಯಿಲ್ಲದೆ ಮೇಲ್ಮನೆಯ ಕೆಲವು ಸದಸ್ಯರ ಹೆಸರನ್ನು ಸೇರಿಸಿದ್ದಕ್ಕಾಗಿ ಎಎಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಭಾನಾಯಕ ಪೀಯೂಷ್ ಗೋಯಲ್ ಅವರು ನಿರ್ಣಯ ಮಂಡಿಸಿದ್ದರು. ಧ್ವನಿಮತದ ಮೂಲಕ ಅಮಾನತು ನಿರ್ಣಯವನ್ನು ಅಂಗೀಕರಿಸಲಾಗಿದೆ.