ನವದೆಹಲಿ: ದಲಿತ ಯುವತಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ.
ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ಗ್ರೇಟರ್ ನೋಯ್ಡಾದಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಬಳಿಕ ಕಾಲ್ನಡಿಯಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಪ್ರಿಯಾಂಕಾ, “ಕಳೆದ ವರ್ಷ ನಾವು ಉನ್ನಾವೊ ಮಗಳಿಗಾಗಿ ಹೋರಾಡುತ್ತಿದ್ದೆವು. ಒಂದು ವರ್ಷದಲ್ಲಿ ಯುಪಿಯ ಪರಿಸ್ಥಿತಿ ಬದಲಾಗಿಲ್ಲ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳೆಯರ ಸುರಕ್ಷತೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಹತ್ನಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.