Sunday, 15th December 2024

ರಾಹುಲ್ ಗಾಂಧಿಗೆ ಕರೋನಾ ಸೋಂಕು

ನವದೆಹಲಿ: ದೇಶಾದ್ಯಂತ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನಾ ಸೋಂಕು ತಗುಲಿದೆ ಎಂಬುದನ್ನು ಸ್ವತ: ರಾಹುಲ್ ಮಾಹಿತಿ ನೀಡಿದ್ದಾರೆ.

ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾವು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ ಎಂದು ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.