ಕಾಂಗ್ರೆಸ್ ನಾಯಕ (congress leader) ರಾಹುಲ್ ಗಾಂಧಿ (Rahul Gandhi) ಅವರು ಮೀಸಲಾತಿ ವಿರೋಧಿ ( anti-reservation) ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ನಾಯಕರ (BJP leaders) ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್, ತಮ್ಮ ಪಕ್ಷವು ಶೇ. 50ರ ಮಿತಿಯನ್ನು ಮೀರಿ ಮೀಸಲಾತಿಯನ್ನು ನೀಡಲಿದೆ. ನಾವು ಮೀಸಲಾತಿ ವಿರೋಧಿಗಳಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಮೀಸಲಾತಿ ವಿರೋಧಿ ಹೇಳಿಕೆಯನ್ನು ನೀಡಿದ್ದೇನೆ ಎಂದು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ಈ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ. ನಾನು ಮೀಸಲಾತಿ ವಿರೋಧಿ ಅಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾವು ಶೇ. 50ರ ಮಿತಿಯನ್ನು ಮೀರಿ ಮೀಸಲಾತಿ ನೀಡುತ್ತೇವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಅಮೆರಿಕದಲ್ಲಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸಂಬಂಧಿಸಿ ಬಿಜೆಪಿ ಬುಧವಾರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ನಾಯಕರ ಮೀಸಲಾತಿ ಹೇಳಿಕೆ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿ, ದೇಶವನ್ನು ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಕಾಂಗ್ರೆಸ್ ನಾಯಕರಿಗೆ ಅಭ್ಯಾಸವಾಗಿದೆ ಎಂದು ಹೇಳಿದ್ದಾರೆ.
ಅದು ಜೆಕೆಎನ್ಸಿಯ ದೇಶ ವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರಲಿ ಅಥವಾ ಭಾರತ ವಿರೋಧಿ ಹೇಳಿಕೆಗಳನ್ನು ನೀಡಲಿ. ವಿದೇಶಿ ವೇದಿಕೆಗಳಲ್ಲಿ, ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕುತ್ತಾರೆ ಮತ್ತು ಭಾವನೆಗಳನ್ನು ಘಾಸಿಗೊಳಿಸುತ್ತಾರೆ ಎಂದು ಶಾ ಹೇಳಿದ್ದರು.
Standing with forces that conspire to divide the country and making anti-national statements have become a habit for Rahul Gandhi and the Congress party. Whether it is supporting the JKNC's anti-national and anti-reservation agenda in J&K or making anti-India statements on…
— Amit Shah (@AmitShah) September 11, 2024
ರಾಹುಲ್ ಗಾಂಧಿಯವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟು ಮಾಡುವ ಕಾಂಗ್ರೆಸ್ನ ರಾಜಕೀಯವನ್ನು ಬಯಲಿಗೆಳೆಯುತ್ತದೆ. ದೇಶದಲ್ಲಿ ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ನ ಮೀಸಲಾತಿ ವಿರೋಧಿ ಮುಖವನ್ನು ಮುನ್ನೆಲೆಗೆ ತಂದಿದ್ದಾರೆ. ಅವನ ಮನಸ್ಸಿನಲ್ಲಿದ್ದ ಆಲೋಚನೆಗಳು ಅಂತಿಮವಾಗಿ ಪದಗಳಾಗಿ ಹೊರಹೊಮ್ಮಿವೆ ಎಂದು ಶಾ ಅವರು ತಿಳಿಸಿದ್ದರು.
ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಪೋಷಕರನ್ನು ಗುರಿಯಾಗಿಸಿಕೊಂಡು ನೀಡುತ್ತಿರುವ ಹೇಳಿಕೆಗಳು ಆಡಳಿತ ಪಕ್ಷದ ಟೀಕೆಗೆ ಗುರಿಯಾಗಿದೆ.
ಲೋಕಸಭಾ ಚುನಾವಣಾ ಫಲಿತಾಂಶದ ಅನಂತರ ನಮಗೆ ಬಿಜೆಪಿಯ ಭಯ ಮಾಯವಾಗಿದೆ ಎಂದು ರಾಹುಲ್ ಹೇಳಿದ್ದರು.
CM Siddaramaiah: ನಾನೇ ಸಿಎಂ ಆಗಿ ಮುಂದುವರಿಯುವೆ, ಸಂಶಯ ಬೇಡ ಎಂದ ಸಿದ್ದರಾಮಯ್ಯ
ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ಚುನಾವಣಾ ಫಲಿತಾಂಶ ಬಿಜೆಪಿಗೆ ಪಾಠ ಕಲಿಸಿದೆ. ಇದು ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ನಿಂದ ಆಗಿದ್ದಲ್ಲ. ಸಂವಿಧಾನದ ಮೇಲಿನ ದಾಳಿಯನ್ನು ಭಾರತದ ಜನ ಸ್ವೀಕರಿಸುವುದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದರು.