Friday, 22nd November 2024

‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮಕ್ಕೆ ರಾಗಾ ಬೆಂಬಲ: ಗೆಹ್ಲೋಟ್ ಗೆ ಹಿನ್ನಡೆ

ಕೊಚ್ಚಿ: ಕಾಂಗ್ರೆಸ್‌ನ ‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮವನ್ನು ಬೆಂಬಲಿಸುವು ದಾಗಿ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ರಾಹುಲ್ ಹೇಳಿಕೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮುಂಚೂಣಿಯಲ್ಲಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಗೆ ಹಿನ್ನಡೆ ಯಾಗಿದೆ. ಅವರು ಮುಖ್ಯಮಂತ್ರಿ ಹುದ್ದೆಯ ಜೊತೆಗೆ ಅಧ್ಯಕ್ಷ ಗಾದಿ ನಿಭಾಯಿಸುವ ವಿಶ್ವಾಸದಲ್ಲಿದ್ದರು.

71 ವರ್ಷದ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬದ ಆಯ್ಕೆ ಎಂದು ನಂಬಲಾಗಿದೆ. ಆದರೆ ಅವರು ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಬಯಸುತ್ತಿಲ್ಲ. ತಾನು ಸಿಎಂ ಸ್ಥಾನ ಬಿಟ್ಟುಕೊಟ್ಟರೆ , ತನ್ನ ಪ್ರತಿಸ್ಪರ್ಧಿ ಸಚಿನ್ ಪೈಲಟ್‌ ಆ ಸ್ಥಾನಕ್ಕೆ ಕೂರಬಹುದು ಎಂಬ ಭಯ ಅವರನ್ನು ಕಾಡುತ್ತಿದೆ ಎನ್ನಲಾಗಿದೆ.

ಕಾಂಗ್ರೆಸ್ ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಉದಯಪುರದಲ್ಲಿನಡೆದ ಚಿಂತನ ಶಿಬಿರದಲ್ಲಿ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನಿಯಮವನ್ನು ಅಳವಡಿಸಿಕೊಂಡಿದೆ.