Thursday, 12th December 2024

ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದೂಡಿಕೆ

ವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್ ಪುರದ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ವಕೀಲರ ಮುಷ್ಕರದಿಂದಾಗಿ ಏಪ್ರಿಲ್ 2 ಕ್ಕೆ ಮುಂದೂಡಲಾಗಿದೆ.

ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಈ ಪ್ರಕರಣದ ವಿಚಾರಣೆಯನ್ನು ಶುಕ್ರವಾರ ನಿಗದಿಪಡಿಸಲಾಗಿತ್ತು.

ಆದರೆ ವಕೀಲರು ತಮ್ಮ ವಿವಿಧ ಬೇಡಿಕೆಗಳ ಮೇಲೆ ಮುಷ್ಕರದಿಂದಾಗಿ ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದಿದ್ದರಿಂದ ವಿಚಾರಣೆಯನ್ನು ಏಪ್ರಿಲ್ 2 ಕ್ಕೆ ಮುಂದೂಡಲಾಗಿದೆ ಎಂದು ಅರ್ಜಿದಾರರ ವಕೀಲ ಸಂತೋಷ್ ಪಾಂಡೆ ಹೇಳಿದರು.

ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ 2018 ರ ಮೇ 8 ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಿಶ್ರಾ ಆಗಸ್ಟ್ 4, 2018 ರಂದು ಪ್ರಕರಣ ದಾಖಲಿಸಿದ್ದರು.