Saturday, 14th December 2024

ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್‌ ನಾಯಕ ಮುಂದು

ಹಮದಾಬಾದ್‌: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುಜರಾತ್‌ನ ಪೋರ್‌ಬಂದರ್‌ನಿಂದ ಅಸ್ಸಾಂವರೆಗೆ ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮುಂದಾ ಗಿದ್ದಾರೆ.

ಈ ತಿಂಗಳು ರಾಯಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಪೋರ್‌ಬಂದರ್‌ನಿಂದ ಯಾತ್ರೆ ಆರಂಭಿಸಲು ಚಿಂತಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

“ಎರಡನೇ ಹಂತದ ಯಾತ್ರೆಯ ದಿನಾಂಕಗಳು ಅಂತಿಮವಾಗಿಲ್ಲ. ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಭಾರತ್‌ ಜೋಡೋ ಯಾತ್ರೆಗೆ ನಾಗರಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಈ ವೇಳೆ ನಿರು ದ್ಯೋಗ, ಬೆಲೆ ಏರಿಕೆ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಾಯಿತು,’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡರೊಬ್ಬರು ತಿಳಿಸಿದರು.

“ಹಾಥ್‌ ಸೆ ಹಾಥ್‌ ಜೋಡೋ’ ಯಾತ್ರೆಗೆ ಉತ್ತಮ ರೀತಿಯಲ್ಲಿ ಬೆಂಬಲ ವ್ಯಕ್ತವಾಗುತ್ತದೆ ಎಂದರು.