Sunday, 15th December 2024

ಸ್ಮೃತಿ ಇರಾನಿ ಕಡೆಗೆ ರಾಹುಲ್ ಗಾಂಧಿ ‘ಫ್ಲೈಯಿಂಗ್ ಕಿಸ್..!

ನವದೆಹಲಿ: ಲೋಕಸಭೆಯಲ್ಲಿ ತಮ್ಮ ಭಾಷಣ ಮುಗಿಸಿ ಲೋಕಸಭೆಯಿಂದ ಹೊರ ನಡೆಯುವ ಮುನ್ನ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ಕಡೆಗೆ ನೋಡುತ್ತಾ ‘ಫ್ಲೈಯಿಂಗ್ ಕಿಸ್’ ನೀಡಿದ್ದಾರೆ ಎಂದು ವರದಿಯಾಗಿದೆ.

ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 21 ಮಂದಿ ಮಹಿಳಾ ಸಂಸದರು ಸ್ಪೀಕರ್‌ ಓಂ ಬಿರ್ಲಾಗೆ ಲಿಖಿತ ದೂರು ನೀಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣ ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಸ್ಮೃತಿ ಇರಾನಿ ಅವರು, ಕೆಲವರ ವರ್ತನೆಯನ್ನು ನಾನು ಆಕ್ಷೇಪಿಸುತ್ತೇನೆ. ನನಗಿಂತ ಮುಂಚೆ ಮಾತನಾಡಿದ ವ್ಯಕ್ತಿ, ಹೊರಡುವ ಮುನ್ನ ಅಸಭ್ಯತೆಯನ್ನು ಪ್ರದರ್ಶಿಸಿದರು. ಸ್ತ್ರೀದ್ವೇಷಿ ಪುರುಷನೊಬ್ಬನಿಂದ ಮಾತ್ರ ಮಹಿಳೆಯರು ಹಾಜರಿರುವ ಸದನಕ್ಕೆ ಫ್ಲೈಯಿಂಗ್ ಕಿಸ್ ಮಾಡಲು ಸಾಧ್ಯ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಮಹಿಳಾ ಸಂಸದೆಯೊಬ್ಬರ ಕಡೆಗೆ ನೋಡುತ್ತಾ ‘ಫ್ಲೈಯಿಂಗ್ ಕಿಸ್’ ಮಾಡುವ ಈ ವರ್ತನೆಗೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.

ಶೋಭಾ ಕರಂದ್ಲಾಜೆ ಮಾತನಾಡಿ, ಸ್ಮೃತಿ ಇರಾನಿ ಮಾತಾಡುವಾಗ ಮಹಿಳಾ ಸಂಸದರತ್ತ ನೋಡಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಇಂದು ಎಂಥ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.