Wednesday, 11th December 2024

ಪ್ರಧಾನಿ ಕುರಿತು ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ನೀಡಿದೆ.

2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಹೀಗಾಗಿ ಗುಜರಾತ್ ನ ಸೂರತ್ ಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಇಂದು ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನಂತರ ಅವರಿಗೆ ನ್ಯಾಯಾಲಯ ಜಾಮೀನು ನೀಡಿತು.