Friday, 22nd November 2024

ರಾಹುಲ್ ಗಾಂಧಿಗೆ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ

ವದೆಹಲಿ: ಸಂಸತ್ತಿನಿಂದ ಅನರ್ಹಗೊಂಡ ನಂತರ ಸಂಸದೀಯ ಸವಲತ್ತುಗಳನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ದೆಹಲಿ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ.

ಹೊಸ ಪಾಸ್‌ಪೋರ್ಟ್ ನೀಡಲು ಎನ್‌ಒಸಿ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿಯನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಭಾಗಶಃ ಅಂಗೀಕರಿಸಿದೆ.

ಸಂಸದರಾಗಿ ತಮ್ಮ ಅನರ್ಹತೆಯ ನಂತರ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಒಪ್ಪಿಸಿದ ನಂತರ ರಾಹುಲ್ ಗಾಂಧಿ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಗಾಗಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.

‘ನಾನು ನಿಮ್ಮ ಅರ್ಜಿಯನ್ನು ಭಾಗಶಃ ಅನುಮತಿಸುತ್ತಿದ್ದೇನೆ. 10 ವರ್ಷಗಳಲ್ಲ, ಆದರೆ ಮೂರು ವರ್ಷಗಳು ಮಾತ್ರ’ ಎಂದು ನ್ಯಾಯಾಲಯ ಹೇಳಿದೆ.

ರಾಹುಲ್​​​​ ಗಾಂಧಿ ಅವರು ತಮ್ಮ ಅನರ್ಹತೆಯ ನಂತರ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್​​ನ್ನು ಸರ್ಕಾರಕ್ಕೆ ಒಪ್ಪಿಸಿದ ನಂತರ ಅವರು ನಿರಾಕ್ಷೇಪಣಾ ಪ್ರಮಾಣಪತ್ರಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.