Monday, 9th September 2024

ನೀತಿ ಸಂಹಿತೆ ಉಲ್ಲಂಘನೆ: ರಾಹುಲ್ ವಿರುದ್ದ ಕ್ರಮಕ್ಕೆ ಆಗ್ರಹ

ವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನದ ದಿನ ತಮ್ಮ ಟ್ವಿಟರ್‌ ಖಾತೆ ಯಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ರಾಜಸ್ಥಾನ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು, ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಮತದಾನ ಮಾಡು ವಂತೆ ಜನರಿಗೆ ಕರೆ ನೀಡಿದ್ದಾರೆ.

‘ರಾಜಸ್ಥಾನವು ಉಚಿತ ಚಿಕಿತ್ಸೆ, ಉಚಿತ ಗ್ಯಾಸ್‌ ಸಿಲಿಂಡರ್‌, ಬಡ್ಡಿ ರಹಿತ ಕೃಷಿ ಸಾಲ, ಆಂಗ್ಲ ಶಿಕ್ಷಣ, ಹಳೇ ಪಿಂಚಣಿ ವ್ಯವಸ್ಥೆ, ಜಾತಿಗಣತಿಯನ್ನು ಆಯ್ಕೆ ಮಾಡಲಿದೆ’ ಎಂದು ಪೋಸ್ಟ್‌ ಮಾಡಿದ್ದಾರೆ. ಅದೇ ಟ್ವೀಟ್‌ನಲ್ಲಿ, ‘ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್‌ ಸರ್ಕಾರವನ್ನು ಆರಿಸಿ’ ಎಂದೂ ಒತ್ತಾ ಯಿಸಿದ್ದಾರೆ.

ಮತದಾನಕ್ಕೂ ಪೂರ್ವ 48 ಗಂಟೆ ಯಾವುದೇ ರೀತಿಯ ಪ್ರಚಾರ ನಡೆಸದಂತೆ ನಿಯಮವಿದೆ. ಆದರೆ ರಾಹುಲ್‌ ಗಾಂಧಿಯವರ ಈ ಪೋಸ್ಟ್‌ ಅದನ್ನು ಉಲ್ಲಂಘಿಸಿದೆ. ಕಾಂಗ್ರೆಸ್‌ ನಾಯಕ ಜನಪ್ರತಿನಿಧಿಗಳ ಕಾಯ್ದೆಯನ್ನು ಹಾಗೂ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ರಾಹುಲ್‌ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಿಕೊಂಡು, ಕ್ರಮ ಕೈಗೊಳ್ಳುವಂತೆ ರಾಜಸ್ಥಾನದ ಮುಖ್ಯ ಚುನಾವಣಾಧಿಕಾರಿಗೆ ಚುನಾವಣಾ ಆಯೋಗ ಸೂಚನೆ ನೀಡಬೇಕು ಎಂದೂ ಬಿಜೆಪಿ ಆಗ್ರಹಿಸಿದೆ.

Leave a Reply

Your email address will not be published. Required fields are marked *