ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ರಾಯಗಡದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‍ಕೇರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ತಿಳಿಸಿದ್ದಾರೆ.
ಳಿಗ್ಗೆ 7 ಗಂಟೆಯವರೆಗೆ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಪತ್ತೆಯಾದ 11 ಜನರಲ್ಲಿ ಈ ಮೃತರು ಸೇರಿದ್ದಾರೆ. ನಾಪತ್ತೆಯಾಗಿರುವ ಏಳು ಜನರ ಪತ್ತೆಗಾಗಿ ನಮ್ಮ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.
ತನಿಖೆಯ ಪ್ರಕಾರ, ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ ನಂತರ ರಾಸಾಯನಿಕ ಹೊಂದಿರುವ ಬ್ಯಾರೆಲ್‍ಗಳಿಗೆ ಬೆಂಕಿ ತಗುಲಿದ್ದು, ಬೆಂಕಿ ಕೆನ್ನಾಲಿಗೆಗೆ ಕಾರಣವಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.