Monday, 13th May 2024

ಭಾರೀ ಮಳೆ: ತಮಿಳುನಾಡು, ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

 ಮಿಳುನಾಡು: ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತ ವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಧಿಕಾರಿ ಗಳು ಚೆನ್ನೈನಲ್ಲಿ 5,093 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತ ವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ.

ಚೆನ್ನೈ ಹೊರತುಪಡಿಸಿ, ತಿರು ವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಸೇಲಂ, ನಾಮಕ್ಕಲ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಿಸಲಾಗಿದೆ.

error: Content is protected !!