ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಔರಂಗಾ ಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕೆಂದೂ ಆಗ್ರಹಿಸಿದ್ದಾರೆ.
ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸಲು ನಾನು ನಮ್ಮ ಕಾರ್ಯಕರ್ತ ರಲ್ಲಿ ಕೇಳಿಕೊಂಡಿದ್ದೆ. ನಂತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ ‘ಮಾತೋಶ್ರೀ’ (ಸಿಎಂ ಉದ್ಧವ್ ಠಾಕ್ರೆ ನಿವಾಸ)ದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿದ್ದರು.
ಶಿವಸೇನೆ ಕಾರ್ಯಕರ್ತರು ಮತ್ತು ರಾಣಾ ದಂಪತಿ ನಡುವೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾದರೆ, ‘ಮಾತೋಶ್ರೀ’ ಏನು ಮಸೀದಿಯೇ ಎಂದು ಪ್ರಶ್ನಿಸಿದರು.