Sunday, 15th December 2024

ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ಗೆ ಕರೊನೋತ್ತರ ಸಮಸ್ಯೆಯಿಂದಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಸವಾಯ್ ಮಾನ್ ಸಿಂಗ್ ಆಸ್ಪತ್ರೆಗೆ ಕರೆತರಲಾಗಿದೆ. ಇದೀಗ ಅವರ ತೋವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ಆಸ್ಪತ್ರೆ ವೈದ್ಯರು ನೀಡಿರುವ ಮಾಹಿತಿ ಪ್ರಕಾರ, ಸ್ಕ್ಯಾನಿಂಗ್ ಮಾಡಿದಾಗ ಆರ್ಟರಿ ಶೇ.90ರಷ್ಟು ಬ್ಲಾಕ್ ಆಗಿರುವುದು ತಿಳಿದುಬಂದಿದೆ.

ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ, ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ, ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆಂಜಿಯೋಪ್ಲಾಸ್ಟಿ ಮಾಡ ಲಾಗಿದೆ. ನಾನು ಆರೋಗ್ಯವಾಗಿದ್ದೇನೆ ಆದಷ್ಟು ಬೇಗ ಆಸ್ಪತ್ರೆಯಿಂದ ಬಿಡುಗಡೆ ಯಾಗುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಏಪ್ರಿಲ್‌ನಲ್ಲಿ ಕರೊನಾ ಸೋಂಕು ದೃಢಪಟ್ಟಿತ್ತು. ಕರೋನಾ ನಿಯಮ ಪಾಲನೆ ಮಾಡಬೇಕಾದ ಹಿನ್ನೆಲೆಯಲ್ಲಿ ಐಸೋಲೇಷನ್ ಒಳಗಾಗಲಿದ್ದು, ಐಸೋಲೇಷನ್ ನಲ್ಲಿಯೇ ನನ್ನ ಕಾರ್ಯವನ್ನು ಮುಂದು ವರೆಸುತ್ತೇನೆಂದು ಹೇಳಿದ್ದರು.