ನವದೆಹಲಿ: ರಾಜಸ್ಥಾನದ ಬಿಕಾನೇರ್ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಕಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರ ಪ್ರಕಾರ, ಮಂಗಳವಾರ ರಾತ್ರಿ 11:36 ಕ್ಕೆ ರಾಜಸ್ಥಾನದ ಬಿಕಾನೇರ್ನಲ್ಲಿ 10 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಟ್ವೀಟ್ ಮಾಡಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.