Friday, 13th December 2024

ಯುವಕನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಥಳಿತ

ಜುಂಜುನು: ರಾಜಸ್ಥಾನದ ಜುಂಜುನು ಜಿಲ್ಲೆಯ ಉದಯಪುರವತಿ ಪಟ್ಟಣ ದಲ್ಲಿ ಯುವಕನೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಗ್ರಾಮಸ್ಥರು ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದೆ.

ಗ್ರಾಮಸ್ಥರು ಯುವಕನನ್ನು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಆಗುತ್ತಿದೆ.

ಉದಯಪುರವತಿ ಪಟ್ಟಣದ ವಾರ್ಡ್ ನಂ. 18 ರಲ್ಲಿ, ಮದ್ಯಪಾನ ಮಾಡಿದ ಯುವಕನೊಬ್ಬ ಶಿವನ ದೇವಸ್ಥಾನದಲ್ಲಿ (ಉದಯಪುರವತಿ ಶಿವ ಮಂದಿರ) ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಸ್ಥಳೀಯರ ಪ್ರಕಾರ, ಯುವಕ ಸಂಪೂರ್ಣವಾಗಿ ಕುಡಿದ ಅಮಲಿನಲ್ಲಿ ಕೃತ್ಯ ಎಸಗಿದ್ದ. ಈತ ನಿತ್ಯ ಗಲಾಟೆ ಮಾಡುತ್ತಿದ್ದಾನೆ ಮತ್ತು ಈ ಪ್ರದೇಶದಲ್ಲಿ ಶಾಂತಿ ಕದಡುವ ಇಂತಹ ಕೃತ್ಯಗಳನ್ನು ಮಾಡುತ್ತಾನೆ ಎಂದು ಹೇಳಿದ್ದಾರೆ.