ಪರೀಕ್ಷೆಗೂ ಮುನ್ನವೇ ಉದಯಪುರ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಉತ್ತರ ಪಡೆಯುತ್ತಿದ್ದ 40 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆಯನ್ನು ರದ್ದುಪಡಿಸಲಾಗಿದ್ದು, ನೇಮಕಾತಿಗೆ ಜನವರಿ 29 ರಂದು ಮರು ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನ ಲೋಕಸೇವಾ ಆಯೋಗ (RPSC) ನಡೆಸಿದ ಒಂಬ ತ್ತನೇ ಪ್ರಮುಖ ಪರೀಕ್ಷೆ ಇದಾಗಿದೆ.
ಸಿಕ್ಕಿಬಿದ್ದಿರುವ 40 ಮಂದಿಗೆ ಶುಕ್ರವಾರ ರಾತ್ರಿಯೇ ಪ್ರಶ್ನೆಪತ್ರಿಕೆ ಸಿಕ್ಕಿದ್ದು, ಹೀಗಾಗಿ ಬಸ್ ನಲ್ಲಿ ಚಲಿಸುತ್ತಿದ್ದಾಗಲೇ ಉತ್ತರ ಬರೆಯು ತ್ತಿದ್ದರು. ಸಿಕ್ಕಬಿದ್ದವರಲ್ಲಿ ಸುಮಾರ 6-7 ಮಂದಿ ನಕಲಿ ಅಭ್ಯರ್ಥಿಗಳಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಏಳು ಖಾಸಗಿ ಮತ್ತು ಸರ್ಕಾರಿ ಶಿಕ್ಷಕರು ಉತ್ತರ ಬರೆಯಲು ಅಭ್ಯರ್ಥಿಗಳಿಗೆ ಸಹಾಯ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಜೋಧಪುರ ಪ್ರದೇಶದವನಾಗಿದ್ದು, ಪ್ರತಿ ಅಭ್ಯರ್ಥಿಯಿಂದ ಸುಮಾರು 5 ರಿಂದ 8 ಲಕ್ಷ ರೂ. ಪಡೆದುಕೊಂಡಿದ್ದಾನೆಂದು ಮೂಲಗಳು ತಿಳಿಸಿವೆ.
Read E-Paper click here