Friday, 13th December 2024

ರತ್ನಗಿರಿ ಸುರಂಗದಲ್ಲಿ ಹಳಿ ತಪ್ಪಿದ ರಾಜಧಾನಿ ಎಕ್ಸ್ಪ್ರೆಸ್

ಮುಂಬೈ: ರಾಜಧಾನಿ ಎಕ್ಸ್ ಪ್ರೆಸ್ ರೈಲು ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ವೇಳೆ, ಹಳಿ ತಪ್ಪಿರುವ ಘಟನೆ ಶನಿವಾರ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ.

ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಮಡ್ಗಾಂವ್ ನಿಲ್ದಾಣಕ್ಕೆ ಹೊರಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವು ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ. ಮುಂಬೈನಿಂದ 325 ಕಿಲೋ ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.