Saturday, 23rd November 2024

ರಾಜೀವ್ ಗಾಂಧಿ 32ನೇ ಪುಣ್ಯಸ್ಮರಣೆ: ಶ್ರದ್ಧಾಂಜಲಿ ಸಲ್ಲಿಸಿದ ಗಣ್ಯರು

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 32ನೇ ಪುಣ್ಯಸ್ಮರಣೆ ಯಾಗಿದ್ದು, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೀರ ಭೂಮಿಯಲ್ಲಿರುವ ರಾಜೀವ್‌ ಗಾಂಧಿ ಸಮಾಧಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಪುಷ್ಪನಮನ ಸಲ್ಲಿಸಿದರು.

1984 ರಲ್ಲಿ ತಮ್ಮ ತಾಯಿ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡರು. ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

1944 ರ ಆಗಸ್ಟ್ 20 ರಂದು ಜನಿಸಿದ ರಾಜೀವ್ ಗಾಂಧಿ, ಮೇ 21, 1991 ರಂದು ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿ ಚುನಾ ವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಆತ್ಮಾಹುತಿ ಬಾಂಬ್ ದಾಳಿಯಿಂದ ಹತ್ಯೆಗೀಡಾ ದರು.