ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಅವರು ಇಂದಿನಿಂದ ಮೂರು ದಿನಗಳ ಕಾಲ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಭೇಟಿ ಮಾಡಲಿದ್ದು, ಮಾಲ್ಡೀವಿಯನ್ ಸಹವರ್ತಿ ಮರಿಯಾ ಅಹ್ಮದ್ ದೀದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಅಬ್ದುಲ್ಲಾ ಶಾಹಿದ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಉಭಯ ದೇಶಗಳ ನಡುವಿನ ರಕ್ಷಣಾ ಸಂಬಂಧಗಳ ಕುರಿತು ಚರ್ಚೆಯ ಸಮಯದಲ್ಲಿ ಪರಿಶೀಲಿಸಲಾಗುತ್ತಿದ್ದು, ಈ ಕ್ಷೇತ್ರದಲ್ಲಿ ಸ್ನೇಹ ರಾಷ್ಟ್ರಗಳ ಪಾಲುದಾರರ ಸಾಮಥ್ರ್ಯ ವೃದ್ಧಿಗೆ ಭಾರತದ ಬದ್ಧತೆಗೆ ಅನುಗುಣವಾಗಿ, ಸಚಿವ ರಾಜನಾಥ್ ಸಿಂಗ್ ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗಳಿಗೆ ಒಂದು ವೇಗದ ಗಸ್ತು ಹಡಗು ಮತ್ತು ಲ್ಯಾಂಡಿಂಗ್ ಕ್ರಾಫ್ಟ್ ನ್ನು ಉಡುಗೊರೆಯಾಗಿ ನೀಡ ಲಿದ್ದಾರೆ.
ಇದೇ ವೇಳೆ ಭಾರತೀಯ ವಲಸಿಗರೊಂದಿಗೆ ಸಂವಹನ ನಡೆಸಲಿದ್ದು, ಈ ಭೇಟಿ ಉಭಯ ದೇಶಗಳ ನಡುವಿನ ಸ್ನೇಹದ ಬಲವಾದ ಬಂಧಗಳನ್ನು ನಿರ್ಮಿಸುವಲ್ಲಿ ಪ್ರಮುಖ ಹೆಗ್ಗುರು ತಾಗಿದೆ ಎಂದು ಹೇಳಲಾಗಿದೆ.
ಭಾರತ ಮತ್ತು ಮಾಲ್ಡೀವ್ಸ್ ಸಾಗರ ಭದ್ರತೆ, ಭಯೋತ್ಪಾದನೆ, ಮೂಲಭೂತೀಕರಣ, ಕಡಲ್ಗಳ್ಳತನ, ಕಳ್ಳಸಾಗಣೆ, ಸಂಘಟಿತ ಅಪರಾಧ ಮತ್ತು ನೈಸರ್ಗಿಕ ವಿಕೋಪಗಳು ಸೇರಿದಂತೆ ಅನೇಕ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.