ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಭಾಗ ಮಾರ್ಚ್ 14ರಂದು ಆರಂಭವಾಗಲಿದೆ. ಅಲ್ಲಿಯವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆಯಾಗಿದೆ.
ಕೇಂದ್ರ ಬಜೆಟ್-2022-23ಕ್ಕೆ ಸಂಬಂಧಪಟ್ಟಂತೆ ರಾಜ್ಯಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ ಬಳಿಕ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಸದನದ ಕಲಾಪ ಮುಂದೂಡಿದರು.